×
Ad

ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು; ಶೀಘ್ರ ಚೇತರಿಕೆಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಹಾರೈಕೆ

Update: 2023-10-17 12:09 IST

ಬೆಂಗಳೂರು: ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶೀಘ್ರ ಚೇತರಿಕೆಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಹಾರೈಸಿದ್ದಾರೆ. 

ಈ ಸಂಬಂಧ ಟ್ವೀಟ್‌ (X) ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ʼʼಮೊಣಕಾಲು ನೋವು ನಿಮಿತ್ತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆʼʼ ಎಂದು ಹಾರೈಸಿದ್ದಾರೆ. ʼʼಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜು ಬೊಮ್ಮಾಯಿ ಅವರು ಶೀಘ್ರ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆʼʼ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿಕುಮಾರ್‌ ಟ್ವೀಟ್‌ ಮಾಡಿದ್ದಾರೆ. 

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಟ್ವೀಟ್‌ ಮಾಡಿ, ʼʼಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆʼʼ ಎಂದು ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News