×
Ad

ಬಿಬಿಎಂಪಿ : ಅಕ್ರಮ ಕಾಮಗಾರಿಗಳ ತನಿಖಾ ವರದಿ ಸಿಎಂಗೆ ಸಲ್ಲಿಕೆ

Update: 2025-08-30 20:34 IST

ಬೆಂಗಳೂರು, ಆ. 30: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) 2019-20ರಿಂದ 2022-23ರ ವರೆಗೆ ನಡೆದಿರುವ ಕಾಮಗಾರಿಗಳ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ತನಿಖಾ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದಾರೆ.

ಶನಿವಾರ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನ್ಯಾ.ಎಚ್.ಎನ್. ನಾಗಮೋಹನ ದಾಸ್ ಅವರು ವರದಿ ಸಲ್ಲಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 2023ರ ಜು.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.

ಈ ಹಿನ್ನೆಲೆಯಲ್ಲಿ 2023ರ ಆ.5.ರಂದು ತಜ್ಞರಗಳನ್ನೊಳಗೊಂಡ ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಲಾಗಿತ್ತು. 2023ರ ಡಿ.15ರಂದು ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ಹಿಂಪಡೆದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ವಿಚಾರಣಾ ಆಯೋಗಕ್ಕೆ ತನಿಖೆಯನ್ನು ವರ್ಗಾಯಿಸಿತ್ತು.

ಆಯೋಗವು ಕಾಮಗಾರಿಗಳ ಕಡತ ಪರಿಶೀಲನೆ, ಕಾಮಗಾರಿಗಳ ಸ್ಥಳ ಪರಿಶೀಲನೆ ಮತ್ತು ಕಾಮಗಾರಿಗಳ ಲೆಕ್ಕ ಪರಿಶೀಲನೆಯನ್ನು ನಡೆಸಿ 8,900 ಪುಟಗಳ ವರದಿಯನ್ನು ಸಲ್ಲಿಸಿದೆ. ಆಯೋಗವು ರ್ಯಾಂಡಮ್ ಆಯ್ಕೆ ಮೂಲಕ ಆಯ್ಕೆಯಾದ 528 ಮತ್ತು ಇತರೆ 233 ಸೇರಿ ಒಟ್ಟು 761 ಪೂರ್ಣಗೊಂಡ ಕಾಮಗಾರಿಗಳ ತನಿಖೆ ನಡೆಸಿ ಹಲವು ನ್ಯೂನತೆಗಳನ್ನು ಪತ್ತೆ ಮಾಡಲಾಗಿದೆ.

ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಎಚ್.ಎನ್. ನಾಗಮೋಹನ ದಾಸ್ ಆಯೋಗವು ಶಿಫಾರಸು ಮಾಡಿದೆ. ಜೊತೆಗೆ ಸುಧಾರಣಾ ಕ್ರಮಕೈಗೊಳ್ಳಲು ಶಿಫಾರಸು ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News