×
Ad

ಬೆಳಗಾವಿ: ವಿವಸ್ತ್ರ ಪ್ರಕರಣದ ಸಂತ್ರಸ್ತೆಯನ್ನು ಭೇಟಿಯಾದ ರಾಷ್ಟ್ರೀಯ ಮಹಿಳಾ ಆಯೋಗ

Update: 2023-12-16 14:08 IST

Photo: ANI

ಬೆಳಗಾವಿ: ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಪ್ರಕರಣದ ಅನ್ವೇಷಣೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಸಂತ್ರಸ್ತ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ  ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿತು.

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗಡುಪ್ ನೇತೃತ್ವದ ತಂಡ, ಘಟನೆಯ ಸಮಗ್ರ ಮಾಹಿತಿ ಕಲೆಹಾಕಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಉಪ ಆಯುಕ್ತ ರೋಹನ್ ಜಗದೀಶ್ ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News