×
Ad

ಬೆಳಗಾವಿ: ನಡು ರಸ್ತೆಯಲ್ಲಿ ಹೊತ್ತಿ ಉರಿದ ಬಸ್; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Update: 2023-11-18 21:39 IST

ಬೆಳಗಾವಿ: ಆಕಸ್ಮಿಕ ಬೆಂಕಿ ತಗುಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ ಬಳಿ ನಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ

ನಡು ರಸ್ತೆಯಲ್ಲಿ ಬಸ್ ಗೆ ಬೆಂಕಿ ತಗಲುತ್ತಿದ್ದಂತೆಯೇ ಪ್ರಯಾಣಿಕರನ್ನು ಕೆಳಗಿಳಿಸಿ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಯಮಕನಮರಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News