×
Ad

ಬೆಳಗಾವಿ: ವಿದ್ಯುತ್ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೃತ್ಯು

Update: 2023-08-12 12:33 IST

ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು 

ಬೆಳಗಾವಿ: ನಿರ್ಮಾಣ ಹಂತದ ಮನೆಯಲ್ಲಿ ವಿದ್ಯುತ್ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೃತಪಟ್ಟಿರುವ ಘಟನೆ ಇಲ್ಲಿನ ಶಾಹೂ ನಗರದಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ. 

ಮೃತರನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾ ಮೂಲದವರಾದ ಈರಪ್ಪ ರಾಠೋಡ್, ಶಾಂತವ್ವ ರಾಠೋಡ್ ಮತ್ತು 3ನೇ ತರಗತಿ ಓದುತ್ತಿದ್ದ ಅನ್ನಪೂರ್ಣಾ ರಾಠೋಡ್  ಎಂದು ಗರುತಿಸಲಾಗಿದೆ. 

ಘಟನೆ ವಿವರ:

ಕೆಲ ವರ್ಷಗಳಿಂದ ಬೆಳಗಾವಿ ನಗರದಲ್ಲಿ ನೆಲೆಸಿದ್ದ ಈ ಕುಟುಂಬದವರು ನಿರ್ಮಾಣ ಹಂತದ ಮನೆಯಲ್ಲಿ ವಾಚ್ ಮನ್ ಕೆಲಸ ಮಾಡುತ್ತಿದ್ದರು. ಶನಿವಾರ ಬೆಳಗ್ಗೆ ಮನೆಯಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಿದ ವೇಳೆ ಮೊದಲಿಗೆ ಮೊಮ್ಮಗಳಿಗೆ ವಿದ್ಯುತ್ ತಗುಲಿದೆ, ನಂತರ ಮಗಳನ್ನು ಕಾಪಾಡಲು ಅಜ್ಜ- ಅಜ್ಜಿ ಹೋದಾಗ ಅವರಿಗೂ ವಿದ್ಯುತ್ ತಾಗಿ, ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಎಪಿಎಂಸಿ ಪೊಲೀಸರು ಮತ್ತು ಹೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News