×
Ad

ಬೆಳಗಾವಿ ಅಧಿವೇಶನ: ಡಿ.6ಕ್ಕೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2023-12-03 18:16 IST

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಾಳೆ(ಡಿ.4)ಯಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಡಿ.6ರ ಸಂಜೆ ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ, ಅಧಿವೇಶ ಕಲಾಪದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಎಂದು ತಿಳಿಸಲಾಗಿದೆ.

ಡಿ.6ರ ಸಂಜೆ 6.30ಕ್ಕೆ ಬೆಳಗಾವಿ-ಕೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 'ಫೇರ್‍ಫೀಲ್ಡ್ ಮ್ಯಾಲಿಯಟ್ ಹೋಟೆಲ್' ನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಇ. ತುಕರಾಮ್ ತಿಳಿಸಿದ್ದಾರೆ.

ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಪರಿಷತ್ತಿನ ಸಭಾ ನಾಯಕ ಎನ್.ಎಸ್. ಭೋಸರಾಜು ಸೇರಿದಂತೆ ಪಕ್ಷದ ಎಲ್ಲ ಕಾರ್ಯಾಧ್ಯಕ್ಷರು, ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News