×
Ad

ಬೆಳಗಾವಿ ವಿವಸ್ತ್ರಗೊಳಿಸಿದ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರದ ಚೆಕ್ ವಿತರಣೆ

Update: 2023-12-19 21:15 IST

ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಮುಖ್ಯಮಂತ್ರಿ ನಿಧಿಯಿಂದ 5 ಲಕ್ಷ ರೂ.ಪರಿಹಾರದ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ವಿತರಿಸಿದ್ದಾರೆ.

ಈ ಕುರಿತು ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಲಕ್ಷದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ. ಘಟನೆ ಸಂಬಂಧ ಸಿಐಡಿ ತನಿಖೆಗೂ ಮುನ್ನವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೂ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸರಕಾರ ಸಿಐಡಿಗೆ ಒಪ್ಪಿಸಿದೆ ಎಂದರು.

ಇಂತಹದೊಂದು ಘಟನೆ ಆಗಬಾರದಿತ್ತು, ಆದರೆ ನಮ್ಮ ಭಾಗದಲ್ಲಿ ಆಗಿದೆ. ಮುಂದೆ ಇಂತಹ ಘಟನೆ ಆಗದಂತೆ ಎಲ್ಲರೂ ಪ್ರಯತ್ನ ಮಾಡೋಣ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News