×
Ad

ಬೆಳಗಾವಿ | ಚಪ್ಪಲಿ ಹಾರ ಹಾಕಿ ಮಹಿಳೆಯ ಮೆರವಣಿಗೆ ಪ್ರಕರಣ: 13 ಮಂದಿ ಬಂಧನ

Update: 2023-10-15 23:51 IST

ಬೆಳಗಾವಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಘಟಪ್ರಭಾ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಮಹಿಳೆಯ ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರೋಪಿಗಳನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.

ಅರ್ಜುನ ಗಂಡವ್ವಗೋಳ, ಲಕ್ಷ್ಮಿ ಮಸ್ಕಿ, ಶೋಭಾ ಮಾಳಗಿ, ಮಾರ್ಕಂಡೇಶ್ವರ ಮಹಿಮಗೋಳ, ರಾಘವೇಂದ್ರ ಚಿಂಚಲಿ, ಸರಸ್ವತಿ ಕೋಳಿ, ಸಾವಿತ್ರಿ ಪೂಜೇರಿ, ಕಮಲವ್ವ ಭಜಂತ್ರಿ, ಮಾರುತಿ ದೊಡಮನಿ, ಉದಯ ಗಂಡವ್ವಗೋಳ, ಕೃಷ್ಣಾ ಗಂಡವ್ವಗೋಳ, ಸುಧೀರ ಜೋಡಟ್ಟಿ, ಶಾಲವ್ವ ದೊಡಮನಿ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ರಾತ್ರಿ 9ರ ಸುಮಾರಿಗೆ ಇಲ್ಲಿನ ಮೃತ್ಯುಂಜಯ ಸರ್ಕಲ್‌ನಲ್ಲಿ ಸೇರಿದ ಕೆಲವು ಮಹಿಳೆಯರು ಹಾಗೂ ಪುರುಷರ ಗುಂಪು ಹಣದ ವಿಚಾರವಾಗಿ, ಶ್ರೀದೇವಿ ಎಂಬ ಮಹಿಳೆಯನ್ನು ತರಾಟೆ ತೆಗೆದುಕೊಂಡಿದೆ. ಆ ಬಳಿಕ ಚಪ್ಪಲಿ, ಬೂಟುಗಳನ್ನು ಕಟ್ಟಿ ಹಾರ ಮಾಡಿ ಕೊರಳಿಗೆ ಹಾಕಿ ರಸ್ತೆ ಮಧ್ಯೆ ಮೆರವಣಿಗೆ ಮಾಡಿದ್ದಾರೆ. ಈ ಅಮಾನವೀಯ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಪ್ರಕರಣದಡಿ ಘಟಪ್ರಭಾ ಮಹಿಳಾ ಠಾಣೆಯಲ್ಲಿ 13ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News