ಬಳ್ಳಾರಿ ಗುಂಪು ಘರ್ಷಣೆ| ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
Update: 2026-01-02 16:33 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜನವರಿ 2 : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬವರು ಮೃತಪಟ್ಟ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣದ ಕುರಿತು ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಹೇಳಿದರು.