×
Ad

ಬಳ್ಳಾರಿ ಗುಂಪು ಘರ್ಷಣೆ| ಪರಿಸ್ಥಿತಿ ಅವಲೋಕಿಸಲು ಕಾಂಗ್ರೆಸ್ ನಿಯೋಗ ರವಾನೆ: ಡಿಸಿಎಂ ಡಿ.ಕೆ. ಶಿವಕುಮಾರ್

Update: 2026-01-02 21:57 IST

ಬೆಂಗಳೂರು,ಜ.2: ಬಳ್ಳಾರಿ ನಗರದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಮಧ್ಯೆ ನೆಡೆದಿರುವ ಅಹಿತಕರ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದು, ಈ ಘಟನೆಯಿಂದ ಬಳ್ಳಾರಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಆ ಹಿನ್ನೆಲೆಯಲ್ಲಿ ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಮುಖಂಡರ ನಿಯೋಗವನ್ನು ರವಾನಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಟಿ. ರಘುಮೂರ್ತಿ, ಸಂಸದ ಕುಮಾ‌ರ್ ನಾಯಕ್, ಪರಿಷತ್ ಸದಸ್ಯರಾದ ಜಕ್ಕಪ್ಪನವ‌ರ್, ಬಸವನಗೌಡ ಬಾದರ್ಲಿ ಅವರು ನಿಯೋಗದಲಿ ಇದ್ದಾರೆ.

ತಕ್ಷಣವೇ ಬಳ್ಳಾರಿಗೆ ತೆರಳಿ ಘಟನೆ ನಡೆದಿರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಘಟನೆಯನ್ನು ಸಂಪೂರ್ಣವಾಗಿ ಅವಲೋಕಿಸಿ ಮಾಹಿತಿಯನ್ನು ನೀಡಬೇಕು ಎಂದು ಶಿವಕುಮಾರ್ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News