×
Ad

ಬೇಲೂರು: ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಲ್ಲೆ; ಇಬ್ಬರ ಬಂಧನ

Update: 2023-10-22 12:13 IST

ಬೇಲೂರು: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ 11 ಗಂಟೆಯ ಹೊತ್ತಿಗೆ ಪಟ್ಟಣದ ನೆಹರು ಸರ್ಕಲ್ ನಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿರುವ ಬಗ್ಗೆ  ವರದಿಯಾಗಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಪ್ರಜ್ವಲ್(22) ಎಂದು ಗುರುತಿಸಲಾಗಿದೆ. ತಲೆಗೆ ಪೆಟ್ಟು ಬಿದ್ದಿದ್ದು ಹೆಚ್ಚಿನ ಚಿಕಿತ್ಸೆ ಗಾಗಿ ಗಾಯಾಳುವನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾತ್ರಿ ಪಾಳಿಯಲ್ಲಿ ಕೆಲಸಮಾಡುತ್ತಿದ್ದ ಸಂದರ್ಭದಲ್ಲಿ, ಏಕಾಎಕಿ ಕ್ಯಾಶ್ ಕೌಂಟರ್ ಒಳಗೆ ನುಗ್ಗಿದ ಈರ್ವರು ಪ್ರಜ್ವಲ್ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುತ್ತಿರುವಾಗ ಬಂಕ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಇಬ್ಬರು ಯುವಕರನ್ನು ಥಳಿಸಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಭಂದಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.

 ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹಲ್ಲೆಮಾಡಿರುವ ವ್ಯಕ್ತಿಗಳು ಕೇರಳ ಮೂಲದವರಾಗಿದ್ದು, ಪೈಂಟ್ ಕೆಲಸಕ್ಕೆ ಬೇಲೂರಿಗೆ ಬಂದಿದ್ದರು ಎನ್ನಲಾಗುತ್ತಿದೆ. ಶನಿವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ  ಹಲ್ಲೆ ಮಾಡಿದ ವ್ಯಕ್ತಿಗಳು ಪೆಟ್ರೋಲ್ ಹಾಕಿಸಲು ಬಂಕ್'ಗೆ ಬಂದಿದ್ದರು. ಈ ವೇಳೆ ಪೆಟ್ರೋಲ್ ಹಾಕಲು ವಿಳಂಬವಾದಾಗ ಮಾತಿನ ಚಕಮಕಿ ನಡೆದಿತ್ತು ಎಂದು ಹೇಳಲಾಗುತ್ತಿದೆ.

ಪ್ರಕರಣ ದಾಖಲಿಸಿರುವ ನಗರ ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.


ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ

https://bit.ly/3tfd2Ro ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News