×
Ad

ಬೇಲೂರು | ಜಮೀನಿಗೆ ನುಗ್ಗಿ ಒಂದುವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೆಟೊ ಕಳ್ಳತನ; ದೂರು

Update: 2023-07-05 18:11 IST

ಬೇಲೂರು: ಜಮೀನಿಗೆ ನುಗ್ಗಿ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ರೂ.ಮೌಲ್ಯದ ಟೊಮೆಟೊ ಕಳ್ಳತನ ಮಾಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಬುಧವಾರ ವರದಿಯಾಗಿದೆ.

ಗ್ರಾಮದ ಧರಣಿ ಎಂಬುವವರು ತಮ್ಮ ಜಮೀನಿನಲ್ಲಿ ಟೊಮೊಟೊ ಬೆಳೆದಿದ್ದರು. ಉತ್ತಮವಾದ ಇಳುವರಿ ಬಂದಿದ್ದು ಕಳೆದ ಮೂರು ದಿನಗಳಿಂದ ಟೊಮೊಟೊ ಕುಯ್ದು ಮಾರಾಟ ಮಾಡುತ್ತಿದ್ದರು. ಕಳೆದ ರಾತ್ರಿ ಹೊಲಕ್ಕೆ ನುಗ್ಗಿರುವ ಕಳ್ಳರು ಐವತ್ತರಿಂದ ಅರವತ್ತು ಚೀಲದಷ್ಟು ಟೊಮೊಟೊ ಕಳವುಗೈದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ. ಇದರ ಮೌಲ್ಯ 1.5 ಲಕ್ಷ ಎಂದು ಅಂದಾಜಿಸಲಾಗಿದೆ.

ಇಂದು ಬೆಳಗ್ಗೆ ಧರಣಿ ತಮ್ಮ ಜಮೀನಿನ ಬಳಿ ಹೋದಾಗ ಟೊಮೊಟೊ ಕಳ್ಳತನವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಹಳೇಬೀಡು ಪೊಲೀಸರಿಗೆ ಅವರು ದೂರು ನೀಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟೊಮೊಟೊ ಕಳೆದುಕೊಂಡ ಧರಣಿ ಕಂಗಾಲಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News