×
Ad

ಬೆಂಗಳೂರು: ಅಪಾರ್ಟ್‍ಮೆಂಟ್‍ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಮೃತ್ಯು

Update: 2023-08-29 23:02 IST

ಬೆಂಗಳೂರು, ಆ.29: ಖಾಸಗಿ ಅಪಾರ್ಟ್‍ಮೆಂಟ್‍ವೊಂದರ 12ನೇ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಗರದ ಬೆಳ್ಳಂದೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ಬಾಲಕಿ 15 ವರ್ಷದ ಜೆಸ್ಸಿಕಾ ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ವರ್ಷದಿಂದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ತಂದೆ ತಾಯಿ ಜೊತೆ ವಾಸವಿದ್ದ ಬಾಲಕಿ ಏಕಾಏಕಿ ಈ ರೀತಿಯಾಗಿ ಮೃತಪಟ್ಟಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈಕೆ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತಿದ್ದಳು. ಇವರು ತಮಿಳುನಾಡು ಮೂಲದ ನಿವಾಸಿಗಳಾಗಿದ್ದು, ಕೆಲ ವರ್ಷಗಳಿಂದ ಬೆಂಗಳೂರಿನಲ್ಲೇ ಕುಟುಂಬದೊಂದಿಗೆ ವಾಸವಿದ್ದಳು ಎಂದು ಹೇಳಲಾಗಿದೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತಿದ್ದ ಬಾಲಕಿ ತಂದೆ, ತನ್ನ ಪತ್ನಿ ಹಾಗೂ ಮಗಳನ್ನು ನೋಡಿಕೊಳ್ಳುತ್ತಿದ್ದರು. ಬಾಲಕಿಯು ಮನೆಯಲ್ಲಿ ಯಾರು ಇಲ್ಲದ ವೇಳೆ 12ನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News