×
Ad

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

Update: 2023-08-03 16:50 IST
ಚಿತ್ರ-  ಮೃತ ದಂಪತಿ ಮತ್ತು ಮಗು

ಬೆಂಗಳೂರು:  ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. 

ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಮಕ್ಕಳಾದ ಮೋಕ್ಷಾ (ಎರಡೂವರೆ ವರ್ಷ), ಸೃಷ್ಟಿ (8 ತಿಂಗಳು) ಎಂದು ಗುರುತಿಸಲಾಗಿದೆ.

ಶೀಗೆಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದೆ.

ದಂಪತಿ ಆಂಧ್ರ ಮೂಲದವರಾಗಿದ್ದಾರೆ. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರೋ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

ಆತ್ಮಹತ್ಯೆಗೂ ಮುನ್ನ ಮಕ್ಕಳನ್ನ ಕೊಲೆಗೈದು ಪತ್ನಿಯೊಂದಿಗೆ ವೀರಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. 

ಸ್ಥಳಕ್ಕೆ ಕಾಡುಗೋಡಿ ಠಾಣಾ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News