ಬೆಂಗಳೂರು ಬಂದ್ | ಕುರುಬೂರು ಶಾಂತಕುಮಾರ್ ಸೇರಿ ಹಲವರು ಪೊಲೀಸ್ ವಶಕ್ಕೆ
Update: 2023-09-26 10:55 IST
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಂ ಬೆಳಗ್ಗೆಯೇ ಪೊಲೀಸರು ಕಾರ್ಯನಿರತರಾಗಿದ್ದಾರೆ.
ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.
ʼʼಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ರಾತ್ರೋರಾತ್ರಿ ಬಂಧಿಸಿರುವುದು ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ.ʼʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.