×
Ad

ಮಾರ್ಗಮಧ್ಯ ಅಸ್ವಸ್ಥಗೊಂಡ ಚಾಲಕ, ಬಿಎಂಟಿಸಿ ಬಸ್ ಚಲಾಯಿಸಿದ ಎಸಿಪಿ: ವೀಡಿಯೊ ವೈರಲ್

Update: 2023-07-18 21:17 IST

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಬಿಎಂಟಿಸಿ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಗರದಲ್ಲಿ ನಡುರಸ್ತೆಯಲ್ಲೇ ನಿಲ್ಲಿಸಲಾಗಿದ್ದ ಬಸ್ಸನ್ನು ಸಹಾಯಕ ಪೊಲೀಸ್ ಕಮಿಷನರ್ ರಾಮಚಂದ್ರಪ್ಪ, ತಾವೇ ಚಲಾಯಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿರುವ ಘಟನೆ ಕಂಡುಬಂದಿದೆ. 

ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಸೋಮವಾರ ಶಿವಾಜಿನಗರ-ಕಾಡುಗೋಡಿ‌ ಮಾರ್ಗವಾಗಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಚಾಲಕ ಮಾರ್ಗ ಮಧ್ಯೆದಲ್ಲಿಯೇ ಅಸ್ವಸ್ಥಗೊಂಡ ಪರಿಣಾಮ ಬಸ್‌ ಚಾಲನೆ ಮಾಡಲು ಸಾಧ್ಯವಾಗದ ಸ್ಥಿತಿಗೆ ಚಾಲಕ ತಲುಪಿದ್ದರು. ಹೀಗಾಗಿ ಚಾಲಕ ಓಲ್ಡ್ ಏರ್ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್​ ನಿಲ್ಲಿಸಿದ್ದ. ಎರಡು ದಿನಗಳ ವಿರೋಧ ಪಕ್ಷಗಳ ನಾಯಕರ ಸಭೆ ಹಿನ್ನೆಲೆ ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನೆಲೆ ಓಲ್ಡ್ ಏರ್ಪೋರ್ಟ್​ ರಸ್ತೆಯಲ್ಲಿ ಎಸಿಪಿ ರಾಮಚಂದ್ರಪ್ಪ ಅವರು ಭದ್ರತೆಗೆ ನಿಯೋಜನೆಗೊಂಡಿದ್ದರು.

ಈ ವೇಳೆ ರಸ್ತೆ ಮಧ್ಯ ನಿಂತಿದ್ದ ಬಿಎಂಟಿಸಿ ಬಸ್​ ಅನ್ನು ಗಮನಿಸಿದ ರಾಮಚಂದ್ರಪ್ಪ, ಚಾಲಕನನ್ನು ಆಂಬ್ಯುಲೆನ್ಸ್‌ನಲ್ಲಿ‌ ಆಸ್ಪತ್ರೆಗೆ ಕಳುಹಿಸಿ, ಬಳಿಕ ಬಸ್ ಅನ್ನು ಸುಮಾರು ಒಂದು ಕಿ.ಮೀ ದೂರದ ಬಸ್​ ನಿಲ್ದಾಣದವರೆಗೆ ಸ್ವತಃ ಚಾಲನೆ ಮಾಡಿಕೊಂಡಿ ಹೋಗಿದ್ದಾರೆ.

ಎಸಿಪಿ ರಾಮಚಂದ್ರಪ್ಪ ಅವರು ಬಸ್ ಚಲಾಯಿಸುವ ವೀಡಿಯೊ ಹಂಚಿಕೊಂಡಿರುವ ಹಲವರು, ಅಧಿಕಾರಿಯ ರಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News