×
Ad

ಬೆಂಗಳೂರು: ಹೆಡ್ ಕಾನ್ಸ್‍ಸ್ಟೇಬಲ್ ಆತ್ಮಹತ್ಯೆ

Update: 2023-08-06 19:38 IST

ಬೆಂಗಳೂರು, ಆ. 6: ವಿಜಯನಗರ ಸಂಚಾರ ಠಾಣೆಯ ಹೆಡ್ ಕಾನ್ಸ್‍ಸ್ಟೇಬಲ್ ನವೀನ್ ಕುಮಾರ್ ಕೌಟುಂಬಿಕ ಕಲಹ ಹಿನ್ನೆಲೆ, ಮದ್ಯದಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಹೆಡ್ ಕಾನ್ಸ್‍ಸ್ಟೇಬಲ್ ನವೀನ್ ಕುಮಾರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದ್ದು, ಈ ಬಗ್ಗೆ ಚಂದ್ರಾ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ವಿಜಯನಗರ ಸಂಚಾರ ಠಾಣೆ ಹೆಡ್ ಕಾನ್ಸ್‍ಸ್ಟೇಬಲ್ ಆಗಿದ್ದ ನವೀನ್ ಕುಮಾರ್ ಅತ್ತಿಗುಪ್ಪೆಯಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮದ್ಯದಲ್ಲಿ ವಿಷ ಬೆರಸಿಕೊಂಡು ಕುಡಿದಿದ್ದಾರೆ ಎನ್ನಲಾಗಿದೆ.

ಆ.6ರ ಬೆಳಗ್ಗೆ ನವೀನ್ ಫೋನ್ ಕರೆ ಸ್ವೀಕರಿಸದೇ ಇದ್ದಾಗ ಮನೆಗೆ ಹೋಗಿ ಪರಿಶೀಲಿಸಲಾಗಿದೆ. ಈ ವೇಳೆ ನವೀನ್ ಮೃತದೇಹ ಪತ್ತೆಯಾಗಿತ್ತು. ಬಳಿಕ ಮೃತದೇವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ವಿಷ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News