ನಾಳೆ (ಆ.21) ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ: ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
Update: 2023-08-20 18:26 IST
ಬೆಂಗಳೂರು: 'ನಾಳೆ (ಆ.21) 'ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ' ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದ್ದಾರೆ.
''ಬಂದ್ ಮಾಡುವುದಿಲ್ಲ ಮತ್ತು ಮಾಡುವುದು ತಪ್ಪಾಗುತ್ತದೆ. ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ಇದೆ. ಧನ್ಯವಾದಗಳು'' ಎಂದು ಸಂಸದರು ಟ್ವೀಟ್ ಮಾಡಿದ್ದಾರೆ.
ರಾಮನಗರ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿ ಮಾಡಿರುವ ರಾಜ್ಯ ಸರಕಾರದ ವಿರುದ್ಧ ಆ.21ರಂದು ಬೆಳಗ್ಗೆ 11:00 ಗಂಟೆಗೆ ಜಿಲ್ಲೆಯ ಯಲಿಯೂರು ಸರ್ಕಲ್‍ನಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲು ಬಿಜೆಪಿ ತೀರ್ಮಾನಿಸಿರುವುದಾಗಿ ಶನಿವಾರ ಮಂಡ್ಯ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಐದು ಜಿಲ್ಲೆಗಳ ಬಿಜೆಪಿ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಾಗಿತ್ತು. ಇದೀಗ ಸಂಸದ ಪ್ರತಾಪ್ ಸಿಂಹ ಹೆದ್ದಾರಿ ಬಂದ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.