ಬೆಂಗಳೂರು : ಬೆಂಗಳೂರು ಸ್ಮಾರ್ಟ್ ಮೂಲಸೌಕರ್ಯ ಲಿಮಿಟೆಡ್ (ಬಿ-ಸ್ಮೈಲ್) ಸಂಸ್ಥೆಯಿಂದ 130.33 ಕಿ.ಮೀ.(88 ರಸ್ತೆಗಳನ್ನು 12 ಪ್ಯಾಕೇಜ್)ರಸ್ತೆಯನ್ನು 2,321.17 ಕೋಟಿ ರೂ. ವೆಚ್ಚದಲ್ಲಿ ಹೊಸ ವೈಟ್ ಟ್ಯಾಪಿಂಗ್ ‘ಹೊಸ ಕಾಮಗಾರಿ 2026-27’ ಯೋಜನೆಯನ್ನು ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

‘ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ’ ಹೊರವರ್ತುಲ ರಸ್ತೆಯನ್ನು ಜಾಗತಿಕ ರೂಪದಲ್ಲಿ ವಿನ್ಯಾಸಗೊಳಿಸಿ ಬೆಂಗಳೂರು ಸ್ಮಾರ್ಟ್ ಮೂಲಸೌಕರ್ಯ ಲಿಮಿಟೆಡ್ (ಬಿ-ಸ್ಮೈಲ್) ವತಿಯಿಂದ ಅಭಿವೃದ್ಧಿಪಡಿಸುವ 486.79 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಹಸಿ ಕಸ, ತ್ಯಾಜ್ಯ ಒಣ ಕಸ ಮತ್ತು ರಸ್ತೆ ಗುಡಿಸುವಿಕೆ ತ್ಯಾಜ್ಯದ ಸಂಗ್ರಹಣೆ, ಪ್ರಾಥಮಿಕ ಸಾಗಾಣಿಕೆ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಸೇವೆಯನ್ನು ಸಮರ್ಪಕ ವಾಗಿ ನಿರ್ವಹಿಸುವ ಕುರಿತು ಈಗಾಗಲೇ ಅನುಮೋದನೆಯಾಗಿರುವ 10 ಪ್ಯಾಕೇಜ್‍ಗಳ 139 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರದ ಕೆಂಗೇರಿ ವಳಗೇರಹಳ್ಳಿ ಸ.ನಂ. 2018ರಲ್ಲಿ 2 ಎಕರೆ 18 ಗುಂಟೆ ವಿಸ್ತೀರ್ಣದಲ್ಲಿ ನಿರ್ಮಿಸುತ್ತಿರುವ ವಾಣಿಜ್ಯ ಸಂಕೀರ್ಣ/ ಮಲ್ಟಿಪ್ಲೆಕ್ಸ್ ಕಟ್ಟಡಕ್ಕೆ ಅವಶ್ಯವಿರುವ 2ನೇ ಹಂತದ ಕಾಮಗಾರಿ ಗಳನ್ನು 68.50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಅನುಮೋದನೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಗೋವಿಂದರಾಜ ನಗರದಲ್ಲಿರುವ ಬಿಜಿಎಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರವನ್ನು 30 ವರ್ಷ ನಡೆಸಲು ಸಚಿವ ಸಂಪುಟ ಅನುಮೊದನೆ ನೀಡಿದೆ.

ಬೆಂಗಳೂರು ಪೂರ್ವ ತಾಲೂಕಿನ ವರ್ತೂರು ಹೋಬಳಿ, ಮುನ್ನೇಕೊಳಲು ಗ್ರಾಮದ ಸರ್ವೆ ನಂ.41ರಲ್ಲಿನ 5 ಎಕರೆ ಜಮೀನನಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವ ಹಾಸ್ಪೈಸ್ ಟ್ರಸ್ಟ್ ಸಂಸ್ಥೆಗೆ 30 ವರ್ಷಗಳ ಅವಧಿಗೆ ಭೂಮಿಯ ಲೀಸ್ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.