×
Ad

ಬೆಂಗಳೂರು ಕಾಲ್ತುಳಿತ ಪ್ರಕರಣ: ಸಿಐಡಿ ತನಿಖೆ ಚುರುಕು

Update: 2025-06-10 23:23 IST

Photo credit: PTI

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದ್ದು, ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ.

ಸಿಐಡಿ ಇನ್‍ಸ್ಪೆಕ್ಟರ್ ಮಂಜುನಾಥ್ ಮತ್ತು ಅಧಿಕಾರಿಗಳ ತಂಡವು ಘಟನೆಯ ದಿನದ ಕ್ರೀಡಾಂಗಣ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಪ್ರಕರಣದಲ್ಲಿ ಮ್ಯಾಜಿಸ್ಟ್ರೀಟ್ ತನಿಖೆ ತಂಡ ಮಹಜರು ನಡೆಸಿತ್ತು. ಇದೀಗ ಸಿಐಡಿ ಅಧಿಕಾರಿಗಳು ತನಿಖೆಗೆ ವೇಗ ನೀಡಿದ್ದಾರೆ.

ಕ್ರೀಡಾಂಗಣ ಸ್ಥಳಾಂತರಕ್ಕೆ ಕೂಗು: ಕಾಲ್ತುಳಿತ ದುರಂತದ ತನಿಖಾ ಬಿಸಿಯ ನಡುವೆಯೇ ಚಿನ್ನಸ್ವಾಮಿ ಕ್ರೀಡಾಂಗಣ ಸ್ಥಳಾಂತರಕ್ಕೆ ಕೂಗು ಕೇಳಿಬಂದಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆಯಲು ಮುಂದಾಗಿದ್ದಾರೆ. ಈ ಕ್ರೀಡಾಂಗಣ ನಗರದ ಮಧ್ಯ ಭಾಗದಲ್ಲಿ ಇರುವುದರಿಂದ ಒಂದಿಲ್ಲೊಂದು ಸಮಸ್ಯೆಗಳ ತಲೆದೋರುತ್ತವೆ. ಹಾಗಾಗಿ ದೇವನಹಳ್ಳಿ ಕಡೆಗೆ ಸ್ಥಳಾಂತರಿಸಬೇಕೆಂಬುದು ಅವರ ಆಗ್ರಹವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News