ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ
Update: 2025-06-06 15:45 IST
ಹೇಮಂತ್ ನಿಂಬಾಳ್ಕರ್
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಿದೆ. ಬೆನ್ನಲ್ಲೇ ಇದೀಗ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಕಾಲ್ತುಳಿತಕ್ಕೆ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ ಎನ್ನುವ ಆರೋಪ ಕೇಳಿ ಬಂದಿತ್ತು.