×
Ad

ಬೀದರ್: ಮನೆ ಗೋಡೆ ಕುಸಿದು 8 ವರ್ಷದ ಬಾಲಕಿ ಮೃತ್ಯು

Update: 2023-09-29 17:04 IST

ಬೀದರ್:‌ ನಗರ ಸೇರಿದಂತೆ ಬೀದರ್ ಜಿಲ್ಲೆಯ ಹಲವೆಡೆ ಗುರುವಾರ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಿದ್ದು 8 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ. 

ಎರಡನೇ ತರಗತಿಯಲ್ಲಿ ಓದುತ್ತಿದ್ದ ಸಂಧ್ಯಾರಾಣಿ ಸಂಜುಕುಮಾರ ಕಾಂಬಳೆ ಮೃತ ಬಾಲಕಿ ಎಂದು ಗುರುತಿಸಲಾಗಿದೆ. 

ಮೃತ ಬಾಲಕಿಯ ಮನೆ ಮುಂಭಾಗದಲ್ಲಿದ್ದ ತಗಡಿನ ಒಂದು ಕೋಣೆಯ ಮನೆಯಲ್ಲಿ ಯಾರೂ ಇರುತ್ತಿರಲಿಲ್ಲ. ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಜಿಟಿಜಿಟಿ ಮಳೆಗೆ ಮನೆಗೋಡೆ ಮತ್ತಷ್ಟು ನೆನೆದಿದ್ದವು. ಈ ಮನೆ ಪಕ್ಕದಲ್ಲಿ ಬಾಲಕಿ ಆಟವಾಡುವಾಗ ಗೋಡೆ ಕುಸಿದು ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ತರುವಷ್ಟರಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. 

ಸ್ಥಳಕ್ಕೆ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಖಟಕ ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News