ಬೆಂಗಳೂರು : ಪರಿಸರ ಮತ್ತು ಎಸ್‍ಟಿಪಿ ಅಳವಡಿಕೆ ನಿಯಮ ಪಾಲನೆ ಮಾಡದ ಕಾರಣ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ'ಗೆ ಅನುಮತಿ ನೀಡಲಾಗುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಲಿವುಡ್‍ನವರು ಈ ಬಾರಿ ಬಿಗ್ ಬಾಸ್ ನಡೆಸಲು ಅನುಮತಿ ಪಡೆದುಕೊಂಡಿಲ್ಲ. ಕಳೆದ ವರ್ಷದ ಹಳೆಯ ದಂಡವನ್ನು ಇನ್ನೂ ಪಾವತಿಸಿಲ್ಲ. ಜತೆಗೆ, ಪರಿಸರ ನಿಯಮಗಳನ್ನು ಸರಿಪಡಿಸಿಕೊಂಡಿಲ್ಲ ಮತ್ತು ಎಸ್‍ಟಿಪಿ ಅಳವಡಿಕೆ ನಿಯಮಗಳನ್ನು ಪಾಲಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಹೀಗೆ ವಿವಿಧ ಎಲ್ಲ ಲೋಪಗಳನ್ನು ಸರಿಪಡಿಸಿಕೊಳ್ಳದೆ ಹೋದರೆ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor