ಬೆಂಗಳೂರು : 2023 ರಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಆ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದಂತಾಗಿದೆ.

2023ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಅಂದಿನ ಬಿಜೆಪಿ ಸರಕಾರದ ವಿರುದ್ದ 40 ಪರ್ಸೆಂಟ್ ಕಮೀಷನ್ ಸರಕಾರ ಎಂದು ರೇಟ್ ಕಾರ್ಡ್ ಜಾಹೀರಾತು ನೀಡಿತ್ತು. ಈ ಬಗ್ಗೆ ಬಿಜೆಪಿ ಖಾಸಗಿ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.

ಇದರ ಪ್ರಾಥಮಿಕ‌ ವಿಚಾರಣೆ ನಡೆಸಿದ್ದ 42 ನೇ ಎಸಿಎಂಎಂ ನ್ಯಾಯಾಲಯ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಖುದ್ದು ಹಾಜರಾತಿಗೆ ಸಮನ್ಸ್ ಜಾರಿ‌ಮಾಡಿತ್ತು. ಈ ವೇಳೆ ನ್ಯಾಯಾಲಯದ ಸಮನ್ಸ್ ಹಾಗೂ ಖಾಸಗಿ ದೂರಿನ‌ ಸಿಂಧುತ್ವ ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್ ಮೆಟ್ಟಿಲೇರಿತ್ತು.

ಇದರ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಇಂದು ಸಂಪೂರ್ಣ ಪ್ರಕರಣವನ್ನು ರದ್ದುಗೊಳಿಸಿ ಅದೇಶ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor