×
Ad

ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ʼಬಿಗ್​ಬಾಸ್ʼ​​ ಸ್ಪರ್ಧಿ ಬಂಧನ ವಿಚಾರ; ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ

Update: 2023-10-23 16:25 IST

ವರ್ತೂರು ಸಂತೋಷ್ -ಬಂಧಿತ ಆರೋಪಿ | ಸಚಿವ ಈಶ್ವರ ಖಂಡ್ರೆ  

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಬಿಗ್‌ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ರಾತ್ರಿ ಬಂಧಿಸಿದ್ದು, ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. 

ʼʼಬಿಗ್​ಬಾಸ್​​ ಸ್ಪರ್ಧಿ ವರ್ತೂರ್ ಸಂತೋಷ್​  ಎಂಬವರು ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾರೆ ಎಂಬ ಆ ದೂರಿನ ಆಧಾರದ ಮೇಲೆ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆದುತ್ತಿದ್ದಾರೆ. ವನ್ಯ ಜೀವಿಗಳ ಕಾನೂನಿನ ಆಧಾರದ ಮೇಲೆ ಬಂಧನ ಮಾಡಲಾಗಿದೆ. ಇದರಲ್ಲಿ ಯಾರೇ ಇದ್ದರೂ ಕಾನೂನು ರೀತಿ ಕ್ರಮ ಜರುಗಿಸಲಾಗುವುದುʼʼ ಎಂದು ಅವರು ಹೇಳಿದರು. 

ʼʼವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ನನಗೆ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ಕೊಟ್ಟಿದಾರೆ. ತನಿಖೆ ನಡೆಸಿ ಹುಲಿಯ ಉಗುರು ಎಂದು ಗುರುತಿಸಿದ ಮೇಲೆ ಕಾನೂನು ರೀತಿ ಕ್ರಮ ಜರುಗಿಸುತ್ತಾರೆʼʼ ಎಂದು ಅವರು ತಿಳಿಸಿದರು. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News