×
Ad

ʼಬಿಗ್​ ಬಾಸ್ʼ​​ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನ ನ್ಯಾಯಾಂಗ ಬಂಧನ

Update: 2023-10-23 17:08 IST

ವರ್ತೂರು ಸಂತೋಷ್

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ರವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಇಂದು ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಬ್ಬದ ಹಿನ್ನೆಲೆ ಎರಡು ದಿನ ಕೋರ್ಟ್ ರಜೆ ಇದ್ದ ಕಾರಣ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದು ಸಂತೋಷ್‌ರನ್ನು ಹಾಜರು ಪಡಿಸಲಾಯಿತು. 

ವರ್ತೂರು ಸಂತೋಷ್ ಗೆ ನ.6 ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News