×
Ad

ಬಿಬಿಎಂಪಿ ಕಸದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Update: 2023-09-25 19:29 IST

ಬೆಂಗಳೂರು, ಸೆ.25: ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿಲ್ಲಿಸಿದ್ದ ಬಿಬಿಎಂಪಿ ಕಸದ ಲಾರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಯನಗರದಲ್ಲಿ ವರದಿಯಾಗಿದೆ.

ಕನಕಪುರ ತಾಲೂಕಿನ ಕಲ್ಲಿಗೌಡನ ದೊಡ್ಡಿಯ ಜಯಲಿಂಗ(26) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನ ನಿಯಂತ್ರಣಕ್ಕೆ ಸಿಗದೆ ಲಾರಿ ಹಿಂಬದಿಗೆ ಢಿಕ್ಕಿ ಹೊಡೆದು ಅದರಡಿ ದ್ವಿಚಕ್ರ ವಾಹನ ಸಮೇತ ಯುವಕ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಡಿಸಿಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಯನಗರ ಸಂಚಾರ ಪೊಲೀಸರು ದೌಡಾಯಿಸಿ ಸುಮಾರು 3-4 ಗಂಟೆಗಳ ಕಾಲ ಶ್ರಮಿಸಿ ಲಾರಿಯಡಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News