ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತ್ಯು
Update: 2023-09-26 20:12 IST
ಕಲಬುರಗಿ: ರಸ್ತೆ ವಿಭಜಕಕ್ಕೆ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಗರದ ಹೊರವಲಯದ ನಾಗನಳ್ಳಿ ರಸ್ತೆಯ ಮೇಲ್ಸೇತುವೆ ಬಳಿ ವರದಿಯಾಗಿದೆ.
ಅಲಿ ಅಬ್ಬಾಸ್ ಮತ್ತು ಇರ್ಫಾನ್ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಮೃತರು ಇಬ್ಬರೂ ಕೂಡ ಎಸ್ಸೆಸೆಲ್ಸಿ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ನಗರದ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.