×
Ad

ಬಿಜೆಪಿ ಟಿಕೆಟ್ ಹೆಸರಲ್ಲಿ ಕೋಟ್ಯಂತರ ರೂ.ವಂಚನೆ: ಚೈತ್ರಾಗೆ ಕೋರ್ಟ್ ಜಾಮೀನು

Update: 2023-12-04 22:54 IST

ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸಂಘ ಪರಿವಾರದ ನಾಯಕಿ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಆರೋಪಿ ಚೈತ್ರಾ ಹಾಗೂ ಏಳನೇ ಆರೋಪಿಯಾಗಿರುವ ಶ್ರೀಕಾಂತ್‍ಗೆ 3ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಪರಪ್ಪನ ಅಗ್ರಹಾರದ ಕಾರಾಗೃಹದಿಂದ ಈ ಇಬ್ಬರು ಬಿಡುಗಡೆಯಾಗಲಿದ್ದಾರೆ. ಈ ಪೈಕಿ ಪ್ರಕರಣ ಸಂಬಂಧ ಮೂವರಿಗೆ ಜಾಮೀನು ಸಿಕ್ಕಿದ್ದಂತಾಗುತ್ತದೆ.

ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳಾದ ಚೈತ್ರಾ, ಗಗನ್ ಕಡೂರು, ಹಾಲಶ್ರೀ ಸ್ವಾಮೀಜಿ, ಧನರಾಜ್, ಚನ್ನನಾಯ್ಕ್, ಪ್ರಜ್ವಲ್, ಶ್ರೀಕಾಂತ್ ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿ ಇತ್ತೀಚೆಗೆ ಈ ಒಂಭತ್ತು ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಸಿಸಿಬಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News