×
Ad

ಶಿವರಾಜ್ ಕುಮಾರ್ ಗೆ ಹುಟ್ಟುಹಬ್ಬ ಸಂಭ್ರಮ: ‘ಘೋಸ್ಟ್‘ ಚಿತ್ರದ ಟೀಸರ್ ಬಿಡುಗಡೆ

Update: 2023-07-12 17:10 IST

ಬೆಂಗಳೂರು: ಸ್ಯಾಂಡಲ್ ವುಡ್ ನ ನಟ ಶಿವರಾಜ್ ಕುಮಾರ್ ಅವರು ಇಂದು (ಜು.12) 61 ವರ್ಷಗಳನ್ನು ಪೂರೈಸಿ 62ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂಭ್ರಮದ ನಡುವೆ ಅವರ ‘ಘೋಸ್ಟ್‘ ಚಿತ್ರದ ಟೀಸರ್ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲಾಯಿತು.

ಶ್ರೀನಿ ನಿರ್ದೇಶನದ ಈ ಸಿನೆಮಾ ದಸರಾ ಸಂದರ್ಭದಲ್ಲಿ  ಬಿಡುಗಡೆಯಾಗಲಿದೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ. 

ಇನ್ನು 62ನೇ ವರ್ಷಕ್ಕೆ ಕಾಲಿಟ್ಟ ಶಿವರಾಜ್ ಕುಮಾರ್ ಅವರಿಗೆ ಸಿನೆಮಾರಂಗದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಶುಭಾಶಯ ಕೋರಿದ್ದಾರೆ.

Full View

62ನೇ ವರ್ಷಕ್ಕೆ ಕಾಲಿಟ್ಟ ಶಿವಣ್ಣಗೆ ಗಣ್ಯರಿಂದ ಶುಭ ಹಾರೈಕೆ:

''ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ದೊರೆಯಲಿ ಎಂದು ಹಾರೈಸುತ್ತೇನೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

''ಕನ್ನಡದ ಖ್ಯಾತ ನಟ, ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮಿಂದ ಚಿತ್ರರಂಗ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸುತ್ತಾ, ಭಗವಂತನ ಆಶೀರ್ವಾದ ಸದಾ ತಮ್ಮ ಮೇಲೆ ಇರಲಿ ಎಂದು ಶುಭ ಹಾರೈಸುತ್ತೇನೆ'' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಶಿವಣ್ಣನಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ, ಸಂತೋಷ, ಯಶಸ್ಸು ಮತ್ತಷ್ಟು ಸಿಗಲೆಂದು ಹಾರೈಸುತ್ತೇನೆ. ಯಾವಾಗಲೂ ಸ್ಫೂರ್ತಿದಾಯಕವಾಗಿರಿ ಎಂದು ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News