×
Ad

ರಾಜ್ಯ ಸರಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ

Update: 2023-10-20 12:14 IST

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಇದೀಗ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.

ʼʼಸಚಿವರು ಕಾಣೆಯಾಗಿದ್ದಾರೆʼʼ ಎಂಬ ಪೋಸ್ಟರ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುತ್ತಿದ್ದ ಬಿಜೆಪಿಯು ʼʼಎಟಿಎಂ ಸರ್ಕಾರದ ಕಲೆಕ್ಷನ್‌ ವಂಶಾವಳಿʼʼ ಎಂದು ರಾಹುಲ್‌ ಗಾಂಧಿ ಸೇರಿ ಹಲವು ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್‌ ನಾಯಕರ ಭಾವಚಿತ್ರವುಳ್ಳ ಪೋಸ್ಟರ್‌ ಗಳನ್ನು ಬಿಡುಗಡೆ ಮಾಡಿದೆ.

ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ, ಶಾಸಕ ರವಿಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ಈ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News