×
Ad

ನಾಳೆ ದಿಲ್ಲಿಗೆ ಬಿಎಸ್‍ವೈ ಪ್ರಯಾಣ; ವಿಪಕ್ಷ ನಾಯಕನ ಹೆಸರು ಘೋಷಣೆ ಸಾಧ್ಯತೆ

Update: 2023-07-01 21:14 IST

(ಬಿಜೆಪಿ ನಾಯಕರು)- Twitter@BSYBJP

ಬೆಂಗಳೂರು, ಜು.1: ರಾಜ್ಯದ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬಂದು ತಿಂಗಳು ಪೂರೈಸಿದ್ದರೂ ಈವರೆಗೆ ಪ್ರತಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡುವಲ್ಲಿ ವಿಫಲವಾಗಿದೆ.

ಜು.3ರಿಂದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಡೆಯಲಿರುವುದರಿಂದ ಸದನದಲ್ಲಿ ಪ್ರತಿಪಕ್ಷವನ್ನು ಮುನ್ನಡೆಸುವವರು ಯಾರು? ಎಂಬ ಪ್ರಶ್ನೆಗೆ ಬಿಜೆಪಿ ಪಾಳಯದಿಂದ ಈವರೆಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ನಾಳೆ(ಜು.2) ಕರೆಯಲಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ರದ್ದು ಮಾಡಲಾಗಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ನಾಳೆ(ಜು.2) ಮಧ್ಯಾಹ್ನ 3 ಗಂಟೆಗೆ ಹೊಸದಿಲ್ಲಿಯಲ್ಲಿ ಬಿಜೆಪಿ ಹಿರಿಯ ನಾಯಕರ ಸಭೆಯನ್ನು ಕರೆಯಲಾಗಿದ್ದು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಬೆಳಗ್ಗೆ 11 ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಅದೇ ಸಭೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಹಾಗೂ ವಿಪಕ್ಷದ ಮುಖ್ಯ ಸಚೇತಕರ ಹೆಸರು ಘೋಷಣೆಯಾಗುವ ನಿರೀಕ್ಷೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News