×
Ad

ಕಾವೇರಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-09-27 10:22 IST

ಚಾಮರಾಜನಗರ :  ಪ್ರತಿ ನಿತ್ಯ 3 ಸಾವಿರ ಕ್ಯೂಸೆಕ್ಸ್ ಕಾವೇರಿ ನದಿ ನೀರನ್ನು ಕರ್ನಾಟಕದಿಂದ ತಮಿಳುನಾಡಿಗೆ 18 ದಿನಗಳ ಕಾಲ ಹರಿಸುವಂತೆ ಕಾವೇರಿ ನದಿ ನೀರು ಹಂಚಿಕೆ ನಿಯಂತ್ರಣ ಪ್ರಾಧಿಕಾರದ ಸೂಚನೆಯನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.

ಮಾದ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರದ ಕುರಿತು ಮಾತನಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ. ಹೀಗಾಗಿ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದರು.

 

ಬಂದ್ ನಿಂದ ಯಾರಿಗೂ ತೊಂದರೆಯಾಗಬಾರದು

ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News