×
Ad

ರಾಜಕೀಯ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿರುವ ಬಿಜೆಪಿ-ಜೆಡಿಎಸ್: ಸಚಿವ ದಿನೇಶ್ ಗುಂಡೂರಾವ್

Update: 2023-09-08 23:08 IST

ಬೆಂಗಳೂರು, ಸೆ.8: ಕೋಮುವಾದಿ ಬಿಜೆಪಿಯೊಂದಿಗೆ ಜಾತ್ಯತೀತ ಲೇಬಲ್ ಅಂಟಿಸಿಕೊಂಡಿರುವ ಜೆಡಿಎಸ್ ಮೈತ್ರಿಗೆ ಮುಂದಾಗಿದೆ. ಜಾತ್ಯತೀತ ತತ್ವ ಎಂಬುದು ಜೆಡಿಎಸ್ ಪಕ್ಷದ ಬೂಟಾಟಿಕೆಯμÉ್ಟ. ಯಾವುದೇ ಸೈದ್ಧಾಂತಿಕ ಬದ್ಧತೆಯಿಲ್ಲದ ಪಕ್ಷವೆಂದರೆ ಅದು ಜೆಡಿಎಸ್ ಮಾತ್ರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಾತ್ಯತೀತ ಸಿದ್ಧಾಂತಕ್ಕೆ ತಿಲಾಂಜಲಿ ಇಟ್ಟು ಕೋಮುವಾದಿ ಪಕ್ಷದ ಜೊತೆ ಕೈ ಜೋಡಿಸುತ್ತಿರುವ ಜೆಡಿಎಸ್‍ಗೆ ಯಾವ ಸಿದ್ಧಾಂತವಿದೆ?. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ, ಎರಡೂ ಪಕ್ಷದವರಿಗೂ ಅನ್ನ ಹಳಸಿತ್ತು, ನಾಯಿ ಹಸಿದಿತ್ತು ಎಂಬಂತಾಗಿದೆ ಎಂದು ಕಿಡಿಗಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ದಿಕ್ಕಿಲ್ಲದ ದೋಣಿ ಹಾಗೂ ಜೆಡಿಎಸ್ ಹಳಿಯಿಲ್ಲದ ರೈಲಿನಂತಾಗಿದೆ. ಇಂತಹ ಅಸಹಾಯಕ ಪರಿಸ್ಥಿತಿಯಲ್ಲಿರುವ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ರಾಜಕೀಯ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿವೆ ಎಂದು ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News