×
Ad

ನಾವು ‘ಘರ್ ವಾಪ್ಸಿ’ ಆರಂಭಿಸಿದರೆ ಬಿಜೆಪಿ-ಜೆಡಿಎಸ್ ಅರ್ಧ ಖಾಲಿ ಆಗುತ್ತೆ: ಸಚಿವ ಪ್ರಿಯಾಂಕ್ ಖರ್ಗೆ

Update: 2023-08-19 18:51 IST

ಬೆಂಗಳೂರು, ಆ.19: ‘ನಾವು ‘ಘರ್ ವಾಪ್ಸಿ’ ಹೆಸರಿನಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ಕೆ ಕೈಹಾಕಿದರೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವೂ ಅರ್ಧದಷ್ಟು ಖಾಲಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಯಾರಿಗೂ ಷರತ್ತು ಹಾಕಿಲ್ಲ. ಪಕ್ಷದ ತತ್ವ-ಸಿದ್ಧಾಂತ ಒಪ್ಪಿದರೆ ಯಾರಿಗಾದರೂ ಸ್ವಾಗತ ಮಾಡುತ್ತೇವೆ. ಸದ್ಯ ಬಿಜೆಪಿ, ಜೆಡಿಎಸ್ ಅವರ ಅಸ್ತಿತ್ವ ಕಾಪಾಡಿಕೊಳ್ಳಲಿ. ಸಚಿವ ಚೆಲುವರಾಯಸ್ವಾಮಿಗೆ ಕೆಲವರು ಸಂಪರ್ಕದಲ್ಲಿ ಇರಬಹುದು. ಕೆಲವರು ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಮಾಜಿ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ನಾಮನಿರ್ದೇಶನಕ್ಕೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿ, ‘ಸುಧಾಮ್ ದಾಸ್ ಅವರಿಗೆ ಕೊಡಲೇಬಾರದೆಂದು ಯಾರು ಹೇಳಿಲ್ಲ. ಬದಲಾಗಿ, ಪರಿಶೀಲಿಸಿ ಎಂದು ಪತ್ರ ಬರೆದಿದ್ದಾರೆ. ಈ ಕುರಿತು ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News