×
Ad

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನ

Update: 2024-05-10 22:51 IST

ಜಿ.ದೇವರಾಜೇಗೌಡ

ಬೆಂಗಳೂರು: ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ ಬೆನ್ನಲ್ಲೇ ಬಿಜೆಪಿ ಮುಖಂಡ ಹಾಗೂ ವಕೀಲ ಜಿ.ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಈ ಹಿನ್ನೆಲೆಯಲ್ಲಿ ಹಿರಿಯೂರು ಗ್ರಾಮಾಂತರ ಪೊಲೀಸರು ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಇನೋವಾ ಕಾರಿನಲ್ಲಿ ಬರುತ್ತಿದ್ದಾಗ ದೇವರಾಜೇಗೌಡ ಬಂಧಿಸಿದ್ದಾರೆ.

ದೇವರಾಜೇಗೌಡ ನಿವೇಶನವನ್ನು ಮಾರಿಸಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎಪ್ರಿಲ್ 1 ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.

ಹೆದರಿಸಿ, ಬೆದರಿಸಿ ನನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೊ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆಎಂದು ಆರೋಪಿಸಲಾಗಿತ್ತು. ಆನಂತರ, ಪ್ರಕರಣಕ್ಕೆ ಸಂಬಂಧಿಸಿ ದೇವರಾಜೇಗೌಡ, ಹಾಸನದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿ ಮೇ 8 ರಂದು ಜಾಮೀನು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿತ್ತು.

ಈ ಮಧ್ಯೆ ದೇವರಾಜೇಗೌಡರು, ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ಹನಿ ಟ್ರ್ಯಾಪ್‌ ಆರೋಪದಲ್ಲಿ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News