×
Ad

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ; ವಿಷಾದ ವ್ಯಕ್ತಪಡಿಸಿದ ಬಿಜೆಪಿ ನಾಯಕ ಎನ್.ರವಿಕುಮಾರ್

Update: 2025-05-26 20:44 IST

 ಎನ್.ರವಿಕುಮಾರ್

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ವಿಧಾನ ಪರಿಷತ್ ವಿಪಕ್ಷ ಮುಖ್ಯಸಚೇತಕ ಎನ್.ರವಿಕುಮಾರ್ ವಿರುದ್ಧ ಕಲಬುರಗಿಯ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಎನ್.ರವಿಕುಮಾರ್ ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ಕಲಬುರಗಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ‘ಜಿಲ್ಲಾಧಿಕಾರಿ(ಫೌಝಿಯಾ ತರನ್ನುಮ್) ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಪಿಎಸ್ ಆಫೀಸರ್ ಆಗಿದ್ದಾರೋ ಗೊತ್ತಿಲ್ಲ. ನನಗೆ ಬಹುಶಃ ನಿಮ್ಮ ಚಪ್ಪಾಳೆ ನೋಡಿದರೆ ಜಿಲ್ಲಾಧಿಕಾರಿ ಅವರು ಪಾಕಿಸ್ತಾನದಿಂದ ಬಂದಿರುವಂತೆ ಕಾಣಿಸುತ್ತದೆ' ಎಂದು ರವಿಕುಮಾರ್ ಅವಹೇಳಕಾರಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು.

ತಮ್ಮ ವಿರುದ್ದ ಎಫ್‍ಐಆರ್ ದಾಖಲಾದ ಬೆನ್ನಲ್ಲೇ ರವಿಕುಮಾರ್ ಅವರು, ‘ಕಲಬುರಗಿ ಜಿಲ್ಲಾಧಿಕಾರಿ ಕುರಿತು ನನ್ನ ಅಜಾಗರೂಕತೆಯ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಹೀಗಾಗಿ ಈ ಕೂಡಲೇ ನಾನು ಆ ಹೇಳಿಕೆಯನ್ನು ಹಿಂಪಡೆದಿದ್ದೇನೆ. ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ನಾನು ಆ ಹೇಳಿಕೆಯನ್ನು ಯಾವುದೇ ರೀತಿಯಲ್ಲಿಯೂ ಉದ್ದೇಶಪೂರ್ವಕವಾಗಿ ಹೇಳಿದ್ದಲ್ಲ, ಬದಲಿಗೆ ಬಾಯಿತಪ್ಪಿನಿಂದ ಬಂದ ಹೇಳಿಕೆಯಾಗಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News