×
Ad

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಬಿಜೆಪಿ ನಾಯಕ ಪ್ರೀತಂ ಗೌಡ

Update: 2024-11-28 19:54 IST

 ಪ್ರೀತಂ ಗೌಡ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪ ಕುರಿತಂತೆ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಾಸನದ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಹಿಂಪಡೆದಿದ್ದಾರೆ.

ಪ್ರೀತಂ ಗೌಡ ಪರವಾಗಿ ವಕಾಲತ್ತು ಹಾಕಿದ್ದ ಸಂದೀಪ್‌ ಪಾಟೀಲ್‌ ,ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿ ಹಿಂಪಡೆಯುವ ಸಂಬಂಧ ಮೆಮೊ ಸಲ್ಲಿಸಿದರು.ಇದನ್ನು ಪರಿಗಣಿಸಿದ ನ್ಯಾಯಾಲಯವು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದರೆ ಅದನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಮುಕ್ತವಾಗಿರಿಸಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿತು.ಪ್ರೀತಂ ಗೌಡ ಅರ್ಜಿಯನ್ನು ಹಿಂಪಡೆದಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಪ್ರೀತಮ್‌ರನ್ನು ಬಂಧಿಸದಂತೆ ಒದಗಿಸಿದ್ದ ರಕ್ಷಣೆಯು ಸಹ ಇಲ್ಲವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News