×
Ad

ಧಾರವಾಡದಲ್ಲಿಯೇ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ: ಸಂತೋಷ್ ಲಾಡ್

Update: 2023-08-27 23:56 IST

ಧಾರವಾಡ: ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂದು ಮಾಹಿತಿಯಿದೆ. ಬೇರೆ ಜಿಲ್ಲೆಯ ನಾಯಕರು ಪಕ್ಷಕ್ಕೆ ಸೇರ್ಪಡೆ ಆಗುವ ಕುರಿತು ತಿಳಿದುಬಂದಿಲ್ಲ ಎಂದರು.

ಇನ್ನೂ, ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನು ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ತನಿಖೆ ಮಾಡಲು ಒತ್ತಾಯ ಮಾಡಿದ್ದೇವೆ. ಆದರೆ ಈಗ ನಮ್ಮದೇ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ ಎಂದು ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News