×
Ad

ಬಿಜೆಪಿ ಶಾಸಕ ಮುನಿರತ್ನ ಗನ್‍ ಮ್ಯಾನ್‍ನಿಂದ ಗ್ರಾ.ಪಂ.ಸದಸ್ಯನ ಮೇಲೆ ಹಲ್ಲೆ, ಜೀವ ಬೆದರಿಕೆ: ಆರೋಪ

Update: 2023-07-17 22:03 IST

ಹಲ್ಲೆಗೊಳಗಾದ ಗ್ರಾ.ಪಂ ಸದಸ್ಯ

ಬೆಂಗಳೂರು, ಜು.17: ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಶಾಸಕ ಮುನಿರತ್ನ ಅವರ ಗನ್‍ಮ್ಯಾನ್‍ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಗ್ರಾ.ಪಂ ಸದಸ್ಯ ಬಾಬು ಎಂಬುವವರ ಮೇಲೆ ಗನ್‍ಮ್ಯಾನ್ ಶ್ರೀನಿವಾಸ್ ಹಲ್ಲೆ ನಡೆಸಿದ್ದು, ಶಾಸಕ ಮುನಿರತ್ನ ಗನ್‍ಮ್ಯಾನ್ ಆಗಿರುವ ಶ್ರೀನಿವಾಸ್ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವ ಹಿನ್ನೆಲೆ, ನಿರ್ಮಾಣ ಹಂತದ ಕಟ್ಟಡದಲ್ಲಿ ನಿಯಮ ಪಾಲನೆಯಾಗುತ್ತಿಲ್ಲ ಎಂದು ಬಾಬು ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ರಾಜಾನುಕುಂಟೆ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News