×
Ad

ರಾಜ್ಯ ಸರಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ: ಶಾಸಕ ಸುನೀಲ್ ಕುಮಾರ್

Update: 2025-06-16 20:53 IST

ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್

ಬೆಂಗಳೂರು: ‘ತಮ್ಮದು ಆಲಿಸುವ ಸರಕಾರ ಎಂದು ಜಾಹೀರಾತಿನಲ್ಲಿ ಪೋಸು ಕೊಡುವ ರಾಜ್ಯದ ಕಾಂಗ್ರೆಸ್ ಸರಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ. ಸರಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ?’ ಎಂದು ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

ಸೋಮವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಬಡವರ ಬಗ್ಗೆ ಕಾಳಜಿ, ಸಹಾನೂಭೂತಿ ಇರಲಿ ಎಂದು ಜಿಲ್ಲಾಧಿಕಾರಿಗ ಸಭೆಯಲ್ಲಿ ‘ಪ್ರವಚನ’ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಬಡವರ ಮೇಲೆ ‘ಪ್ರಹಾರ’ ಮಾಡಲು ಹೊರಟಿದ್ದಾರೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಯ ಅಡಿ ವೃದ್ಧರು, ಅಸಹಾಯಕರು, ದುರ್ಬಲರಿಗೆ ನೀಡುತ್ತಿದ್ದ ಪಿಂಚಣಿ ಹಣದ ಮೇಲೆ ಈಗ ಸರಕಾರದ ಕಣ್ಣು ಬಿದ್ದಿದೆ’ ಎಂದು ಟೀಕಿಸಿದ್ದಾರೆ.

‘21.87 ಲಕ್ಷ ವೃದ್ಧಾಪ್ಯ ಹಾಗೂ 31.33 ಲಕ್ಷ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಲ್ಲಿ ಅನರ್ಹರನ್ನು ಹುಡುಕುವುದಕ್ಕೆ ಈ ಸರಕಾರ ಮುಂದಾಗಿದ್ದು, 9.04 ಲಕ್ಷ ವೃದ್ಧಾಪ್ಯ ವೇತನದಾರರು 14.15 ಲಕ್ಷ ಸಂಧ್ಯಾ ಸುರಕ್ಷಾ ಕಾರ್ಡ್‍ಗಳನ್ನು ರದ್ದು ಮಾಡುವುದಕ್ಕೆ ಕಂದಾಯ ಇಲಾಖೆಯಿಂದ ಅಧಿಕೃತ ಆದೇಶ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News