×
Ad

ಹೆಸರು ಬದಲಾಯಿಸಿಕೊಂಡ ಸಂಸದ ಪ್ರತಾಪ್ ಸಿಂಹ!

Update: 2023-11-26 21:13 IST

ಪ್ರತಾಪ್ ಸಿಂಹ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ತಮ್ಮ ಇಂಗ್ಲೀಷ್ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಸಂಖ್ಯಾಶಾಸ್ತ್ರದ ಪ್ರಕಾರ ತನ್ನ ಹೆಸರಿನಲ್ಲಿ ಸ್ವಲ್ಪ ಬದಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Prathap Simha ಎಂಬ ಹೆಸರನ್ನು Pratap Simmha ಎಂದು ಬದಲು ಮಾಡಿಕೊಂಡಿರುವುದನ್ನು ಅಫಿಡವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಗೆ ಇನ್ನೂ 6 ತಿಂಗಳು ಬಾಕಿ ಇರುವಾಗಲೇ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿರುವುದು ಹಲವು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.

ಮೈಸೂರು –ಕೊಡಗು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದೇ ಅನುಮಾನ ಎಂಬ ವಿಚಾರಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಅವರು ಸಂಖ್ಯಾಶಾಸ್ತ್ರದ ಮೊರೆ ಹೋಗಿ ತಮ್ಮ ಇಂಗ್ಲೀಷ್ ಹೆಸರನ್ನು ಬದಲಾವಣೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News