×
Ad

ಕೇಸರಿ ಶಾಲಿನಿಂದ ಸಂವಿಧಾನದ ಅನುಯಾಯಿಗಳನ್ನು ಎದುರಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿಗೆ ಅರ್ಥವಾದಂತಿದೆ:‌ ಪ್ರಿಯಾಂಕ್‌ ಖರ್ಗೆ

Update: 2025-01-07 14:14 IST

ಬೆಂಗಳೂರು: ಕೇಸರಿ ಶಾಲಿನಿಂದ ಸಂವಿಧಾನದ ಅನುಯಾಯಿಗಳನ್ನು ಎದುರಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿಗರಿಗೆ ಅರ್ಥವಾದಂತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿಯವರ ಹೆಗಲ ಮೇಲೆ ಕೇಸರಿ ಶಾಲು ಹೋಯ್ತು, ನೀಲಿ ಶಾಲು ಬಂತು. ನನಗೆ ಇದೊಂದು ವಿಶೇಷ ವಿಸ್ಮಯದಂತೆ ಭಾಸವಾಗುತ್ತಿದೆ ಎಂದು ಹೇಳಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜೈ ಭೀಮ್ ಎನ್ನುವುದು ಫ್ಯಾಷನ್ ಎಂದಿದ್ದ ಅಮಿತ್ ಶಾ ಅವರ ಬಿಜೆಪಿಗೆ, ನೀಲಿ ಶಾಲು ಧರಿಸುವುದು ಈಗ ಹೊಸ “ಫ್ಯಾಷನ್“ ಆಗಿದೆಯೇ? ಅಥವಾ ಕೇಸರಿ ಶಾಲಿನ ಮೇಲೆ ಬಿಜೆಪಿಗರಿಗೆ ಅಸಹನೆ ಉಂಟಾಗಿದೆಯೇ? ಕೇಸರಿ ಶಾಲು ಕಂಡರೆ ನಿರ್ಲಕ್ಷ್ಯವೇ? ಎಂದು ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News