ʼಆಪರೇಷನ್ ಹಸ್ತʼ ಚರ್ಚೆ ನಡುವೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ
ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ( ಸೋಮವಾರ) ಬೆಳಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯು ಆರಂಭಗೊಂಡಿದೆ.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಪಾಲ್ಗೊಂಡರು.
ʼಆಪರೇಷನ್ ಹಸ್ತʼ, ಲೋಕಸಭಾ ಚುನಾವಣೆ ತಂತ್ರಗಾರಿಕೆ ಸಹಿತ ಅನೇಕ ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕ!
ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.