×
Ad

ಜ.27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

Update: 2024-01-23 21:27 IST

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಜ.27ರಂದು ಬೆಳಗ್ಗೆ 9.30 ರಿಂದ ಸಂಜೆ 5.30ರವರೆಗೆ ಅರಮನೆ ಮೈದಾನದಲ್ಲಿ(ಗೇಟ್ ನಂಬರ್ 4) ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದರು.

ಮಂಗಳವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಆಗಮಿಸಲಿದ್ದಾರೆ ಎಂದರು.

ಕಲಬುರ್ಗಿ ಜಿಲ್ಲೆಯ ಗ್ರಾಮವೊಂದರಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಬಿಜೆಪಿ ಇದನ್ನು ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ಇದು ಉದಾಹರಣೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News