×
Ad

ಇನ್ನು 6 ತಿಂಗಳಲ್ಲಿ ಬಿಜೆಪಿ ಉಳಿಯಲ್ಲ, ಇದಕ್ಕೆ ನಾನು ಗ್ಯಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ

Update: 2023-08-14 14:08 IST

ಕಲಬುರಗಿ: ʼʼಇನ್ನು ಆರು ತಿಂಗಳಲ್ಲಿ ಬಿಜೆಪಿ ಉಳಿಯಲ್ಲ. ಕಾದು ನೋಡಿ,ನಾನು ಇದಕ್ಕೆ ಗ್ಯಾರಂಟಿ ಕೊಡುತ್ತೇನೆʼʼ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜನಸ್ನೇಹಿ ಅಭಿಯಾನ‌ ಉದ್ಘಾಟನೆಗೆ ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. 

'ರಾಜಕೀಯ ಮಾಡೋದಕ್ಕೆ ಅವರೊಬ್ಬರಿಗೆ ಮಾತ್ರ ಬರುತ್ತದೆಯಾ? ನಮಗೂ ರಾಜಕೀಯ ಮಾಡುವುದಕ್ಕೆ ಬರಲ್ವಾ?. ನಾವೂ 140 ವರ್ಷ  ಪಕ್ಷ ನಡೆಸಿದವರು. ಇನ್ನು ಆರು ತಿಂಗಳಲ್ಲಿ ಬಿಜೆಪಿಯಲ್ಲಿ ಎಷ್ಟು ಜನ ಉಳಿದುಕೊಳ್ಳುತ್ತಾರೆ ಅಂತಾ ಕಾದು ನೋಡಿ' ಎಂದು ಹೇಳಿದರು. 

ನಿಮ್ಮ ಸಂಪರ್ಕದಲ್ಲಿ ಯಾರಾದರೂ ಇದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ʼʼ ಇದನ್ನು ಬಿಜೆಪಿಯವರಲ್ಲೇ ಕೇಳಿ ನೋಡಿ. ಎಷ್ಟು ಜನ ಶಾಸಕರು ಅಸಮಾಧಾನ ಇದ್ದಾರೆ ಅಂತಾ ಅವರನ್ನೇ ಕೇಳಿ ನೋಡಿʼʼ ಎಂದು ಹೇಳಿದರು. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News