ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿ.ಕೆ.ಶಿವಕುಮಾರ್
Update: 2024-03-11 13:52 IST
Photo: X/@DKShivakumar
ಬೆಂಗಳೂರು : ʼಸಂವಿಧಾನ ತಿದ್ದುಪಡಿʼ ಮಾಡಲು ಬಿಜೆಪಿ 400ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದಿದ್ದ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ʼಎಕ್ಸ್ʼ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, " ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಸಂಸದ ಅನಂತಕುಮಾರ ಹೆಗಡೆ ಅವರ ಹೇಳಿಕೆ ನೋಡಿದರೆ ಬಿಜೆಪಿ ಅಜೆಂಡಾದಲ್ಲಿ ಅದ್ಯಾವ ಪರಿ ವಿಷ ತುಂಬಿಕೊಂಡಿದೆ ಎಂಬುದರ ಸ್ಯಾಂಪಲ್ ಸಿಕ್ಕಂತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ. ಕರ್ನಾಟಕದ ಮತದಾರರೇ ಎಚ್ಚರದಿಂದಿರಿ" ಎಂದು ಹೇಳಿದ್ದಾರೆ.