×
Ad

ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ: ಕಾಂಗ್ರೆಸ್

Update: 2023-07-11 14:02 IST

ಬೆಂಗಳೂರು: ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಕರ್ನಾಟಕಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿದ ಕೇಂದ್ರ ಆಹಾರ ನಿಗಮದ ಹರಾಜು ಪ್ರಕ್ರಿಯೆಯಲ್ಲಿ ಅಕ್ಕಿ ಖರೀದಿಗೆ ಖಾಸಗಿ ಕಂಪೆನಿಗಳು ಆಸಕ್ತಿಯೇ ತೋರುತ್ತಿಲ್ಲ.

ನಮ್ಮ ಸರ್ಕಾರ 34 ರೂಪಾಯಿಗಳ ಖರೀದಿ ದರಕ್ಕೆ ಕೇಳಿದರೂ ನಿರಾಕರಿಸಿದ ಕೇಂದ್ರ ಸರ್ಕಾರ ಖಾಸಗಿಯವರಿಗೆ 31 ರೂಪಾಯಿಗಳಿಗೆ ನೀಡಲು ಸಿದ್ಧವಾದರೂ ಖರೀದಿದಾರರು ಮುಂದೆ ಬರುತ್ತಿಲ್ಲ.

ಹುಳು ಹಿಡಿದು ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು. ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News