×
Ad

ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಬಿಜೆಪಿಯ ಯುವ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ

Update: 2024-04-13 15:23 IST

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ಸರ್ವಜ್ಞ ನಗರ ಕ್ಷೇತ್ರದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಬಿಜೆಪಿ ಹಲವು ಪ್ರಮುಖ ನಾಯಕರು ಕಮಲ ಪಕ್ಷ ಬಿಟ್ಟು ಕಾಂಗ್ರೆಸ್‌ ಗೆ ಸೇರ್ಪಡೆಗೊಂಡಿದ್ದಾರೆ.

ಶನಿವಾರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನವೀನ್, ಹಾಗೂ ಇತರ ಹಲವು ಮುಖಂಡರು ಮತ್ತು ನೂರಾರು ಬಿಜೆಪಿ ಕಾರ್ಯಕರ್ತರು ಇಂಧನ ಸಚಿವರು ಮತ್ತು (ಸಿಇಸಿ ಸದಸ್ಯರು - ಎಐಸಿಸಿ) ಕೆ.ಜೆ.ಜಾರ್ಜ್ ಮತ್ತು ರಾಣಾ ಜಾರ್ಜ್ (ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಸರ್ವಜ್ಞನಗರ ಕ್ಷೇತ್ರ) ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಇದರೊಂದಿಗೆ ಸರ್ವಜ್ಞನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಸ್ತಿತ್ವ ಹಲವು ಪಟ್ಟು ಬಲಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News