ಬೆಂಗಳೂರು : ‘ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರೆಸ್ಸೆಸ್) ಕೆಲವರಿಗೆ ಅವಕಾಶ ಕಲ್ಪಿಸಿದ್ದು, ಅವರಿಗೆ ಈಗಾಗಲೇ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸ್ಪಷ್ಟಣೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಆರೆಸ್ಸೆಸ್ ಹಿನ್ನೆಲೆಯುಳ್ಳವರಿಗೆ ರಾಜೀನಾಮೆ ನೀಡಬೇಕು. ಇಲ್ಲವೇ ಸರಕಾರ ಅವರಿಗೆ ನೀಡಿರುವ ಸ್ಥಾನಮಾನ ರದ್ದು ಮಾಡಬೇಕು. ಆರೆಸ್ಸೆಸ್ ನಂಟು ಇರುವವರಿಗೆ ನಿಗಮ-ಮಂಡಳಿ ಹುದ್ದೆಗಳನ್ನು ನೀಡಿದ್ದರೆ ಹಿಂಪಡೆಯಬೇಕೆಂದು ಸೂಚನೆ ನೀಡಿದ್ದೇವೆ ಎಂದರು.

ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ 400ಕ್ಕೂ ಹೆಚ್ಚು ಮಂದಿ ನೇಮಿಸಿದ್ದು, ಆರೆಸ್ಸೆಸ್ ಹಿನ್ನೆಲೆಯುಳ್ಳವರಿಗೆ ಅಚಾತುರ್ಯದಿಂದ ಒಂದೆರಡು ಸ್ಥಾನಗಳನ್ನು ನೀಡಿದ್ದು, ಅದನ್ನು ಸರಿಪಡಿಸಲಾಗುವುದು. ಇನ್ನೂ ಎರಡು ಪಟ್ಟಿ ಬರಲಿದ್ದು, ಪಕ್ಷ, ಸಂಘಟನೆಗೆ ಶ್ರಮಿಸಿದ ಎಲ್ಲರಿಗೂ ಅವಕಾಶ ನೀಡುವ ಪ್ರಯತ್ನ ಮಾಡಲಾಗುವುದು ಎಂದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor